ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು ಇತ್ತ ನಾಯಕರ ನಡುವಿನ ಮಾತಿನ ವರಸೆಯು ಜೋರಾಗುತ್ತಿದೆ, ಅತಿರೇಕಕ್ಕೆ ಹೋಗುತ್ತಿದೆ, ವೈಯಕ್ತಿಕ ಟಿಕೆ ಟಿಪ್ಪಣಿ ಜೊತೆಗೆ ನಿಂದನೆ ಕೂಡ ಚುನಾವಣೆಯಲ್ಲಿ ನಡೆಯುತ್ತಿದೆ. ಅದೇ ರೀತಿ ಲೋಕಸಭಾ ಚುನಾವಣೆಯ ಅಂಗವಾಗಿ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಅವರು ಲಕ್ಷ್ಮೀ ಹೆಬ್ಬಾಳಕರ ಕುರಿತು ಹಗುರವಾಗಿ ಮಾತನಾಡಿದ್ದಾರೆ.
ಬೆಳಗಾವಿ: ಹೌದು ಇಂದು ನಡೆದ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ನಡೆದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕಾರ್ಯಕ್ರಮದಲ್ಲಿ ಸೇರಿದ ಕಾರ್ಯಕರ್ತರ ಕುರಿತು ಮಾತನಾಡುವ ಬರದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಂದಿರುವುದು ನೋಡಿದರೆ! ” ಇಂದು ರಾತ್ರಿ ಅಕ್ಕಗೆ ನಿದ್ದೆ ಬರಲ್ಲ ಅನಿಸುತ್ತೆ ”. ಇಂದು ರಾತ್ರಿ ನಿದ್ದೆ ಮಾತ್ರೆ ಜೊತೆಗೆ ಒಂದ ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು ಎಂದು ವಿವಾದ ಮೈ ಮೇಲೆ ಎಳೆದುಕೊಂಡರು.