ನಿನ್ನೆ ನಡೆದ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣದ ಕುರಿತು ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಬೆಳಗಾವಿ, ಏ 14: ರಾತ್ರಿ ಮಾತ್ರೆ ಜೊತೆ ಒಂದ ಪೆಗ್ ಹಾಕಬೇಕು ಎಂದು ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಕುರಿತು ನಿನ್ನೆ ರಾತ್ರಿ ಮಾಜಿ ಶಾಸಕ ಸಂಜಯ ಪಾಟೀಲ ಅವರ ಆದರ್ಶ ನಗರದಲ್ಲಿರುವ ಮನೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಈ ಪ್ರಕರಣ ಕುರಿತು ರಾಜ್ಯ ಮಹಿಳಾ ಆಯೋಗ ಸಂಜಯ ಪಾಟೀಲ ಅವರಿಗೇ ನೋಟಿಸ್ ಜಾರಿ ಮಾಡಿದೆ.