ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಕ್ರೀಡಾ ಪಟುಗಳಿಗೆ ವಾರ್ಷಿಕ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕ್ರೀಡಾ ವಿಧ್ಯಾರ್ಥಿ ವೇತನ ಯೋಜನೆಯಡಿಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳು ವಾರ್ಷಿಕ ರೂಪಾಯಿ 10.000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು ಈ ಯೋಜನೆ ಅನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ಬೆಂಗಳೂರು. ಜೂನ್.2: ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿಯನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು 2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ https //sevasindhuservices. karnataka.gov.in ಮೂಲಕ ಆನ್ಲೈನ್ ನಲ್ಲಿ ದಿನಾಂಕ: 30/06/2024 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ  ಷರತ್ತುಗಳು

  • ಅರ್ಜಿದಾರರು 2023- 24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ 6 ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.
  • ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 1-4- 2023 ರಿಂದ 31 3 2024ರ ವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು ಅಂದರೆ ದಿನಾಂಕ 1-4-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ್ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
  • ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
  • ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರು ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.
  • ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂಪಾಯಿ 10,000ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಒಳಗೊಂಡಂತೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲು ಸೂಕ್ತ ಕ್ರಮ ವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚಿಸಿದೆ. ಸರ್ಕಾರದ ಈ ಒಂದು ಯೋಜನೆಯನ್ನು ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳು ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದೆ.

2 Replies to “ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಕ್ರೀಡಾ ಪಟುಗಳಿಗೆ ವಾರ್ಷಿಕ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.”

Comments are closed.