ಗದಗ: KSRTS ಬಸ್ ಹಾಗೂ ಕಾರ ನಡುವೆ ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ.

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ನಾಲ್ವರ ದುರ್ಮರಣ. ಶ್ರಾವಣ ಮಾಸದ ಪ್ರಯುಕ್ತ ಹಾವೇರಿ ಮೂಲದ ಕುಟುಂಬ ಕಲ್ಲಾಪುರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ಕಾರಿನಲ್ಲಿ ಹೊರಟಿದ್ದ ಸಮಯದಲ್ಲಿ ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಇಳಕಲ್ ದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು ಹಾಗೂ ಇನ್ನೊಬ್ಬರನ್ನು  ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ.

ಗದಗ ಅ.18: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಗದಗ್ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಕುಟುಂಬ

ಇನ್ನು ಈ ಭೀಕರ ಅಪಘಾತದಲ್ಲಿ ಹಾವೇರಿ ಮೂಲದ (55) ವರ್ಷದ ರುದ್ರಪ್ಪ ಅಂಗಡಿ, (45) ವರ್ಷದ ಪತ್ನಿ ರಾಜೇಶ್ವರಿ,( 16 )ವರ್ಷದ ಮಗಳು ಐಶ್ವರ್ಯ, ಹಾಗೂ (12)ವರ್ಷದ ವಿಜಯ್ ಮೃತ ದುರ್ದೈವಿಗಳಾಗಿದ್ದಾರೆ.

ಶ್ರಾವಣ ಮಾಸದ ಪ್ರಯುಕ್ತ ಕಲ್ಲಾಪುರದ ಬಸವೇಶ್ವರ ದೇವಸ್ಥಾನದ ದರ್ಶನಕ್ಕೆ ಹೊರಟಿದ್ದ ಕುಟುಂಬಕ್ಕೆ ಯಮನ್  ರೂಪದಲ್ಲಿ ಇಳಕಲ್ ನಿಂದ ಬಂದ ಕೆಎಸ್ಆರ್ಟಿಸಿ ಬಸ್ ಜೋರಾಗಿ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರು. ಒಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದು ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ನರಗುಂದ ಪೊಲೀಸ್ ಠಾಣೆಯ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.