ಶೀಘ್ರವೇ 10 ಸಾವಿರ ಶಿಕ್ಷಕರ ನೇಮಕ ಘೋಷಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ.

ಬೆಂಗಳೂರು ನ.15: ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಕ್ಕಳ ದಿನಾಚರಣೆಯ ದಿನ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಿಗೆ ಖುಷಿ ಸುದ್ದಿಯನ್ನು ನೀಡಿದ್ದಾರೆ. ಈಗಾಗಲೇ ಸರ್ಕಾರಿ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಅನುಗುಣವಾಗಿ ಮೊದಲ ಹಂತದಲ್ಲಿ 10,000  ಶಿಕ್ಷಕರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ನಿನ್ನೆ ದಿನ ಗುರುವಾರ ವಿಧಾನಸೌಧದಲ್ಲಿ ನಡೆದ ಜವಾಹರ್ ಲಾಲ್ ನೆಹರು ಅವರ 135 ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಸರ್ಕಾರಿ ಶಾಲಾ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ ಸಚಿವರು ಉತ್ತರವನ್ನು ನೀಡಿದರು.

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಅಪಾರ ಸಂಖ್ಯೆಯ ಶಿಕ್ಷಕರ ಕೊರತೆ ಇದ್ದು ಈಗಾಗಲೇ 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಅದೇ ರೀತಿ ಇನ್ನೂ ಹತ್ತು 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ತಿಳಿಸಿದರು.