ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕ್ಷುಲಕ ವಿಷಯಗಳಿಗೆ ಕೊಲೆ ಪ್ರಕರಣಗಳು ನಡೆಯುತ್ತಿದ್ದು ಅದರಲ್ಲೂ ಅನುಮಾನಾಸ್ಪದ ಕೊಲೆ ಪ್ರಕರಣ ಹೆಚ್ಚಾಗಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಗಡಿ ಭಾಗದ ತಾಲೂಕಿನಲ್ಲಿ ಕಳೆದ ಎರಡು ಮೂರು ತಿಂಗಳಲ್ಲಿ ನಾಲ್ಕು ಕೊಲೆ ಪ್ರಕಾರಣಗಳಾಗಿದ್ದು ಸದ್ಯ ಅಥಣಿ ತಾಲೂಕಿನ ಜನ ಭಯಭಿತಾರಾಗಿದ್ದಾರೆ.
ಬೆಳಗಾವಿ ಅ. 13: ಯುವಕನೊಬ್ಬನ ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಶವ ಎಸೆದು ಹೋಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ಗಡಿ ತಾಲೂಕಿನಲ್ಲಿ ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾಲ್ಕು ಕೊಲೆಗಳಾಗಿದ್ದು ಸದ್ಯ ತಾಲೂಕಿನ ಜನರು ಭಯಭೀತರಾಗಿದ್ದಾರೆ.
ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಯುವಕನ ವ್ಯಕ್ತಿಯ ಶವ ಪತ್ತೆಯಾಗಿದ್ದು ಮೃತ ಯುವಕನನ್ನು ಮದಭಾವಿ ಗ್ರಾಮದ ಅಪ್ಪಾಸಾಬ ಸಿದ್ದಪ್ಪ ಕಾಂಬಳೆ(37) ಎಂದು ಗುರುತಿಸಿಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.