ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ರಾಜಹಂಸ್ ಬಸ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ: ಕಿತ್ತೂರು ತಾಲೂಕಿನ ತಿಮ್ಮಾಪುರ ಹತ್ತಿರ ಏಕಾಏಕಿ ಬಸ್ಸಿನ ಬ್ರೇಕ್ ಫೇಲಾಗಿ ರಾಜಹಂಸ ಬಸ್ ಪಲ್ಟಿಯಾದ ದುರ್ಘಟನೆ ನಡೆದಿದೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 20 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೋಲೀಸರ ಆಗಮನ ಪರಿಶೀಲನೆ.