ಚಿಕ್ಕೋಡಿ; ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಗಡಿ ಭಾಗದ ನಾಲ್ಕೂ ಸಂಪರ್ಕ ಸೇತುವೆಗಳು ಮುಳುಗಡೆ.

ಬೆಳಗಾವಿ: ರಾಜ್ಯದಲ್ಲಿ ಬಾರಿ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತ ಗೊಂಡಿದ್ದು ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮುಂದುವರೆದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಹಲವು ನದಿಗಳು ಹಾಗೂ ಜಲಪಾತಗಳು ತುಂಬಿ ತುಳುಕುತ್ತಿವೆ.  ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯ ನಾಲ್ಕು ಸಂಪರ್ಕ ಸೇತುವೆಗಳು ಮುಳುಗಡೆಗೊಂಡಿವೆ. ನಿರಂತರ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿರುವ ವೇದಗಂಗಾ, ಕೃಷ್ಣ , ದೂದಗಂಗಾ ನದಿಗಳು.

ನಿಪ್ಪಾಣಿ ತಾಲೂಕಿನ ಕುನ್ನೂರು-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದ್ದು, ಅದೇ ರೀತಿ ವೇದಗಂಗಾ ನದಿಗೆ ಅಡ್ಡಲಾಗಿರುವ ಕೆಳಹಂತದ ಸೇತುವೆ ಮುಳುಗಡೆ. ದೂದ್ ಗಂಗಾ ನದಿಯಿಂದ ಕಾರದಗಾ ಬೋಜ, ಕುನ್ನೂರು – ಭೋಜವಾಡಿ ಸಂಪರ್ಕಿಸುವ ಸೇತುವೆ ಕೂಡ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 55,000 ಕಿಸೆಗೂ ಹೆಚ್ಚು ನೀರಿನ ಒಳಹರಿವು ಹೆಚ್ಚಾಗಿದೆ.

ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿರುವುದರಿಂದ ನದಿಗಳ ಮಟ್ಟದಲ್ಲಿ ಎರಡು ಅಡಿ ನೀರು ಏರಿಕೆಯಾಗಿದೆ ಹೆಚ್ಚಳ ಹಿನ್ನೆಲೆ ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಈಗಾಗಲೇ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ. ಇನ್ನು ಸಂಪರ್ಕ ಕಲ್ಪಿಸುವ ಸೇತುವೆಗಳ ಜಲಾವೃತಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಮತ್ತೆ ಪ್ರವಾಹದ ಭೀತಿ ಎದುರಾಗಬಹುದೆಂಬ ಆತಂಕದಲ್ಲಿರುವ ನದಿ ಪಾತ್ರದ ಜನ. ಈಗಾಗಲೇ ಪ್ರವಾಹದ ಭೀತಿ ಎದುರಾದರೂ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ ಇದುವರೆಗೂ ಒಂದೇ ಒಂದು ಕಾಳಜಿ ಕೇಂದ್ರ ಸಹ ತೆರೆದಿಲ್ಲ.