ರಾಜ್ಯದಲ್ಲಿ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ವಾಗಿದ್ದು ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ: ಸನ್ 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಧಾರವಾಡ ಜಿಲ್ಲೆಯ ವಿದ್ಯಾನಿಕೇತನ ಕಾಲೇಜು ಬೈರದೇವರಕೊಪ್ಪ ವಿದ್ಯಾರ್ಥಿನಿಯಾದ ವಿದ್ಯಾಲಕ್ಷ್ಮಿ ವಿಜ್ಞಾನ ವಿಭಾಗದಲ್ಲಿ ಪ್ರತಿಶತ 600 ಕ್ಕೆ 598 ಅಂಕಗಳ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ್ ಸ್ಥಾನ ಪಡೆದಿದ್ದಾಳೆ.
ಕಲಾ ವಿಭಾಗದಲ್ಲಿ ಮೂರು ಜನ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ NMKRV ಕಾಲೇಜಿನ ವಿದ್ಯಾರ್ಥಿನಿಯಾದ ಮೇಧಾ ಡಿ, ಎಸ್ ಎಸ್ ಪಿ ಯು ಕಾಲೇಜು ವಿಜಯಪುರದ ವಿದ್ಯಾರ್ಥಿ ವೇದಾಂತ, ವಿಜಯನಗರ ಜಿಲ್ಲೆಯ ಬಿ, ವಿ ಕವಿತಾ 600 ಕ್ಕೇ 596 ಅಂಕಗಳು ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ತುಮಕೂರು ಜಿಲ್ಲೆಯ ಜ್ಞಾನವಿ ಎಂಬ ವಿದ್ಯಾರ್ಥಿನಿ 600 ಕ್ಕೆ 597 ಅಂಕಗಳ ಪಡೆಯುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.