ಜೆಡಿಎಸ್ ಹಾಸನ ಸಂಸದ ಪ್ರಜ್ವಲ ರೇವಣ ಅಶ್ಲೀಲ ವೀಡಿಯೋ ಪ್ರಕರಣ ದೇಶಾದ್ಯಂತ ಸಂಚಲನ ಉಂಟು ಮಾಡುತ್ತಿದ್ದು, ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆ ಸ್ವ ಪಕ್ಷೀಯರಿಂದಲೇ ಪ್ರಜ್ವಲ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಒತ್ತಾಯ ಹೆಚ್ಚಾಗುತ್ತಿದ್ದು ಅದೇ ರೀತಿ ಈ ಪ್ರಕರಣದಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದರಿಂದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟನೆ ಮಾಡಲು ನಿರ್ಧಾರ ಕೈಗೊಂಡಿದ್ದಾರೆ.
ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ತುಣುಕುಗಳು ವೈರಲ್ ಹಿನ್ನೆಲೆ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಎಫ್ಐಆರ್ ದಾಖಲಾಗಿದ್ದು ತನಿಖೆ ಕೂಡ ತೀವ್ರ ಗೊಳಿಸಿದ್ದಾರೆ.