ಕೊಪ್ಪಳ: ಹನುಮ ನಾಡಿನಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ಹಲ್ಲೆ.

ಹಲ್ಲೆಗೊಳಗಾದ ವ್ಯಕ್ತಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಧರ್ಮ ಹಾಗೂ ಜಾತಿಗಳ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಮೊನ್ನೆ ರಾಮನವಮಿ ದಿನದಂದು ಜೈ ಶ್ರೀರಾಮ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಲಾಗಿತ್ತು. ಇದರಿಂದ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು, ಅಂತಹದೇ ಪ್ರಕರಣ ಈಗ ಮತ್ತೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮರುಕಳಿಸಿದೆ. ಜೈ ಶ್ರೀರಾಮ ಘೋಷಣೆ ಕೂಗಿದ ಗಂಗಾವತಿಯ ಕುಮಾರ ರಾಠೋಡ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಕೊಪ್ಪಳ, ಏ, 24 : ಹನುಮನಾಡು ಕೊಪ್ಪಳ ಜಿಲ್ಲೆಯಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ. ನಿನ್ನೆ ದಿನ ಹನುಮ ಜಯಂತಿ ಇದ್ದ ಕಾರಣ ಕುಮಾರ ರಾಠೋಡ ಜೈ ಶ್ರೀರಾಮ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮ ನಗರದಲ್ಲಿ ಘೋಷಣೆ ಕೂಗಿದ್ದರು. ಇದರಿಂದ ವಿರೋಧ ವ್ಯಕ್ತ ಪಡಿಸಿ 20 ಜನ ಯುವಕರ ತಂಡವೊಂದು ಕುಮಾರ ಮೇಲೆ ಹಲ್ಲೆ ಮಾಡಿದ ಪ್ರಕರಣ ನಡೆದಿದೆ. ಇದರಿಂದ ಕುಮಾರ ರಾಠೋಡ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಮಯದಲ್ಲಿ ಕೂಡಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಘಟನೇ ನಡೆದ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೋಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.