ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚರ್ಚೆಗೆ ಗ್ರಾಸವಾಗಿದ್ದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ, ಹಾಗೂ ಲೈಂಗಿಕ ದೌರ್ಜನ್ಯ, ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಚಿವ ಶಾಸಕ ಎಚ್, ಡಿ ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ಆದರೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ರೇವಣ್ಣ ಅವರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ್ದು. ಆದ್ದರಿಂದ ವಿಶೇಷ ತನಿಖಾ ತಂಡವು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿದ್ದ ಶಾಸಕ ರೇವಣ್ಣನವರನ್ನು ಬಂಧಿಸಿದ್ದಾರೆ.
ಬೆಂಗಳೂರು ಏ.04: ಜೆಡಿಎಸ್ ಮಾಜಿ ಸಚಿವ ಹೆಚ್,ಡಿ,ರೇವಣ್ಣ ಅವರನ್ನು ವಿಶೇಷ ತನಿಖಾ ತಂಡವು (SIT) ಅಶ್ಲೀಲ ವಿಡಿಯೋ, ಲೈಂಗಿಕ್ ದೌರ್ಜನ್ಯ, ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಯಿಂದ ವಶಕ್ಕೆ ಪಡೆದುಕೊಂಡು ಕಾರ್ಲಟನ್ ಭವನದಲ್ಲಿರುವ SIT ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.