ಮಾಜಿ ಸಿಎಂ S M ಕೃಷ್ಣ ನಿಧನ ಹಿನ್ನೆಲೆ ಬುಧವಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ.

ಬೆಂಗಳೂರು ಡಿ. 10: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ವಿದೇಶಾಂಗ ಸಚಿವರಾಗಿದ್ದ ಹಿರಿಯ ಮುತ್ಸದ್ದಿ ದಿವಂಗತ  ಎಸ್ ಎಮ್ ಕೃಷ್ಣ ಅವರು ವಯೋ ಸಹಜ ಖಾಯಿಲೆ ಇಂದ ಇಂದು ಬೆಳಿಗ್ಗೆ ನಿಧಾನರಾಗಿದ ಕಾರಣ ರಾಜ್ಯದ್ಯಂತ  ಎಲ್ಲಾ ಸರ್ಕಾರಿ ಕಚೇರಿಗಳು ಎಲ್ಲಾ ಸರ್ಕಾರಿ ಶಾಲಾ ಕಾಲೇಜು ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ.

ದಿವಂಗತ ಮಾಜಿ  ಮುಖ್ಯಮಂತ್ರಿ  ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ದಿನಾಂಕ 11/12/2024 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು.

ಅದೇ ರೀತಿ ಮೂರು ದಿನಗಳ ಕಾಲ್ ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.