ಮಾಜಿ ಮುಖ್ಯಮಂತ್ರಿ H D ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬೆಳಗಾವಿಯಲ್ಲಿ ಏಕ ವಚನದಲ್ಲೇ ತಿರುಗೇಟು ನೀಡಿದರು, ಸರ್ಕಾರದ ಗ್ಯಾರಂಟಿ ಇಂದ ರಾಜ್ಯದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ.
ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಇಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಕುಮಾರ ಸ್ವಾಮಿ ವಿರುಧ್ದ ಇಂದು ಬೆಳಗಾವಿಯಲ್ಲಿ ಏಕ್ ವಚನದಲ್ಲೇ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಅಂದ್ರೆ ಏನು ಅರ್ಥ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದೇವೆ. ಅಂತಹ ಯೋಜನೆಗಳಿಂದ ಮಹಿಳೆಯರು ದಾರಿ ಹೇಗೆ ತಪ್ಪುತ್ತಾರೆ? .ಎಂದರು.
ರಾಜ್ಯದ ಪ್ರತಿ ತಾಲೂಕಿನಲ್ಲೂ ಪ್ರತಿಭಟನೆಗೆ ಕರೆಕೊಟ್ಟ ಡಿಕೆ
ಕುಮಾರ್ ಸ್ವಾಮಿ ಹೇಳಿಕೆ ವಿರುದ್ಧ ರಾಜ್ಯದ ಪ್ರತಿ ತಾಲೂಕಿನಲ್ಲೂ ಮಹಿಳಾ ಸಂಘಟನೆಗಳು ಹಾಗೂ ಮಹಿಳೆಯರು ಪಕ್ಷಾತೀತವಾಗಿ ಪ್ರತಿಭಟನೆ ಮಾಡಲು ಕರೆ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ.