ಕಳೆದ ಒಂದು ವಾರಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಶಾಲಾ ಕಾಲೇಜುಗಳನ್ನು ರಜೆ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಎರಡು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ನಿಂತರು ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ರಸ್ತೆಗಳಿಲ್ಲ ಕಾರಣ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಂಪರ್ಕ ಕಲ್ಪಿಸುವ ಸೇತುವೆಗಳು ಜಲಾವೃತಗೊಂಡಿದ್ದು. ಹೀಗಾಗಿ ಸೋಮವಾರ ಹಾಗೂ ಮಂಗಳವಾರ ಕೂಡ ಗೋಕಾಕ್ ತಾಲೂಕಿನ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ನಿಂತರು ಕೂಡ ಬೆಳಗಾವಿಯ ಸಪ್ತ ನದಿಗಳು ತುಂಬಿ ಹರಿಯುತ್ತಿದೆ, ಕಾರಣ ಗೋಕಾಕ್ ತಾಲೂಕಿನ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದ್ದು. ಈಗಾಗಲೇ ಗೋಕಾಕ್ ತಾಲೂಕಿನ ಕೆಲ ಗ್ರಾಮಗಳ ಜನಜೀವನ ಅಸ್ತವ್ಯಸ್ತಗೊಂಡಿದ್ದು. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತ ಕಾಳಜಿ ಕೇಂದ್ರಗಳನ್ನು ತೆರೆದಿದ್ದು ಪ್ರವಾಹಕ್ಕೆ ತುತ್ತಾಗಿರುವ ಕೆಲ ಗ್ರಾಮಸ್ಥರು ಕಾಳಜಿ ಕೇಂದ್ರಗಳಲ್ಲಿ ಆಸರೆಯನ್ನು ಪಡೆಯುತ್ತಿದ್ದು ಹೀಗಾಗಿ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಅನಾನುಕೂಲ ಆಗಿರುತ್ತದೆ.
ಅದೇ ರೀತಿ ಶಾಲೆಗಳಿಗೆ ತೆರಳಲು ಸಂಪರ್ಕಿಸುವ ಸೇತುವೆಗಳು ಈಗಾಗಲೇ ಜಲಾವೃತಗೊಂಡಿದ್ದು, ಮಾರ್ಕಂಡೇಯ ಮತ್ತು ಘಟಪ್ರಭಾ ನದಿಗೆ ಹೊಂದಿರುವ ಸೇತುವೆಗಳು ಜಲಾವೃತಗೊಂಡಿದ್ದು ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಜೊತೆಗೆ ಬಳ್ಳಾರಿ ನಾಲಾ ನೀರು ಹಾಗೂ ಹಿಡಕಲ್ ಡ್ಯಾಮ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಆಗುತ್ತಿದ್ದು ವಿದ್ಯಾರ್ಥಿಗಳ ಹಾಗೂ ಶಿಕ್ಷಕ ಶಿಕ್ಷಕಿಯರ ಹಿತದೃಷ್ಟಿಯಿಂದ ತೊಂದರೆಯಾಗದಂತೆ ಗೋಕಾಕ್ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈಗಾಗಲೇ ತಾಲೂಕಿನ ಎಲ್ಲಾ ಶಾಲಾ ಮುಖ್ಯೋಪಾಧ್ಯರಿಗೂ ಹಾಗೂ ಸಿ ಆರ್ ಪಿ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದು ಸೋಮವಾರ ಹಾಗೂ ಮಂಗಳವಾರ ದಿನ ಶಾಲೆಗಳಿಗೆ ರಜೆ ನೀಡಬೇಕೆಂದು ಘೋಷಿಸಿದ್ದಾರೆ.