ರಾಜ್ಯಾದ್ಯಂತ ನಿರಂತರ ಮಳೆಯಿಂದಾಗಿ ಕೆಲ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೀಡಲಾಗಿತ್ತು. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲೂ ಸಹ ಅತಿಯಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ರಾಮದುರ್ಗು ತಾಲೂಕು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದ ಬೆಳಗಾವಿ ಜಿಲ್ಲಾಧಿಕಾರಿಗಳು.
ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಅಲ್ಲಲ್ಲಿ ಸಂಪರ್ಕ ಕಲ್ಪಿಸುವ ಸೇತುವೆಗಳು ಜಲಾವೃತಗೊಂಡಿದ್ದು ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಯಾವುದೇ ದುರಾದೃಷ್ಟಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ ರೋಶನ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗಾಗಲೇ ನಾಲ್ಕು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿತ್ತು. ಅದೇ ರೀತಿ ನಾಳೆ ದಿನಾಂಕ ಜು 27 ಶನಿವಾರ ದಿನ ಕೂಡ ಜಿಲ್ಲೆಯ ರಾಮದುರ್ಗ ತಾಲೂಕನ್ನು ಹೊರತುಪಡಿಸಿ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು ಸರ್ಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿಗಳು.
ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಈಗಾಗಲೇ ಶಾಲೆಗಳಿಗೆ ರಜೆ ನೀಡಿದ ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.