ಪವಿತ್ರಾ ಗೌಡ ಫೋಟೋ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಕೊಲೆ: ನಟ ದರ್ಶನ್ ಬಂಧನ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

Darshan Pavitra Gowda Case: ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರ ಗೌಡ ಜೊತೆ ಇರುವ ಫೋಟೋಗಳನ್ನು ಇತ್ತೀಚಿಗೆ ಪವಿತ್ರ ಗೌಡ ಸಾಮಾಜಿಕ ಜಾಲತಾನಗಳಲ್ಲಿ  ಫೋಟೋಗಳನ್ನು ಪೋಸ್ಟ್ ಮಾಡಿದ್ದರು ಇದರ ಕುರಿತು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿ ಅಶ್ಲೀಲ  ಕಮೆಂಟ್‌ಗಳನ್ನು ಮಾಡಿದ್ದರು ಹೀಗಾಗಿ ರೇಣುಕಾ ಸ್ವಾಮಿಯನ್ನು ಕರೆದುಕೊಂಡು ಬಂದು ಕಾಮಾಕ್ಷಿಪಾಳ್ಯದಲ್ಲಿ ಕೊಲೆ ಮಾಡಲಾಗಿದೆ. ಇನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ವೇಳೆ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಕೊಲೆಯಾದ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು ಜೂನ್ 9ರಂದು ವಿನಯ ಎನ್ನುವವರಿಗೆ ಸೇರಿದ ಶೆಡ್ಡಿನಲ್ಲಿ ಅವರನ್ನು ಇರಿಸಲಾಗಿತ್ತು ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ ನಾಲ್ಕು ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್ ಇದ್ದ ಬಗ್ಗೆ ಮಾಹಿತಿ ಇದೆ ಹತ್ತೆ ಮಾಡಿ ದೇಹವನ್ನು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಎಸೆದು ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಸೇರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧಿಸಲಾಗಿದೆ. ವಿಜಯನಗರ ಎಸಿಪಿ ಚಂದನ್ ಅವರ ನೇತೃತ್ವದ ತಂಡದಿಂದ  ವಶಕ್ಕೆ ಪಡೆಯಲಾಗಿದೆ.

ಪವಿತ್ರ ಗೌಡ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಪ್ತರಾಗಿದ್ದರು ದರ್ಶನ್ ಜೊತೆ ಇರುವ ಫೋಟೋಗಳನ್ನು ಪವಿತ್ರ ಗೌಡ ಅವರು ಹಂಚಿಕೊಂಡಿದ್ದರು. ಈ ಫೋಟೋಗಳಿಗೆ ಚಿತ್ರದುರ್ಗದ ಮೂಲದ ಸ್ವಾಮಿ ಎಂಬವರು ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ದರ್ಶನವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಸದ್ಯ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.