ಪ್ರವಾಹ ಮುಂಜಾಗ್ರತ ಕ್ರಮ  ಗೋಕಾಕ ತಾಲೂಕಿನ ಎಲ್ಲಾ ಶಾಲೆಗಳಿಗೆ 3 ದಿನ ರಜೆ.

ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗುವ ನಿರೀಕ್ಷೆ ಇರುವುದರಿಂದ ಈಗಾಗಲೇ ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳು ಈಗ ಗೋಕಾಕ್ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ಜುಲೈ 25 ರ ಮಧ್ಯಾಹ್ನದಿಂದ ಜು. 27 ಶನಿವಾರದ ವರೆಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ ಜು.25: ಬೆಳಗಾವಿ ಜಿಲ್ಲಾದ್ಯಂತ ಬಾರಿ ಮಳೆಯಾಗುತ್ತಿದ್ದು ಈಗಾಗಲೇ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ನಿನ್ನೆ ತಾನೆ ಹಿಡಕಲ್ ಜಲಾಶಯದಿಂದ  ನೀರನ್ನು ಹೊರ ಬಿಡಲಾಗಿದ್ದು ಹೀಗಾಗಿ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗುವ ನಿರೀಕ್ಷೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮದಿಂದ ಗೋಕಾಕ್ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ ಅನುದಾನಿತ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆಯನ್ನು ಘೋಷಿಸಲಾಗಿದೆ ಎಂದು ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ ಬಿ ಬಳಿಗಾರ ಅವರು ಹೇಳಿದ್ದಾರೆ.