ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾ ಶಾಲೆ ಚಂದರಗಿ ತಂಡ.

ಬೆಳಗಾವಿ: ದಿನಾಂಕ 19-10-2024 ಹಾಗೂ 20-10-2024 ರಂದು ಎಸ್. ಎಂ. ಕಲೂತಿ ಸಂಯುಕ್ತ ಕ್ರೀಡಾ ಶಾಲೆಯಲ್ಲಿ ಜರುಗಿದ
ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಎಸ್. ಎಂ. ಕಲೂತಿ ಸಂಯುಕ್ತ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕರು ಮತ್ತು 17 ವರ್ಷದ ವಯೋಮಿತಿಯ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ, ವ್ಯವಸ್ಥಾಪಕರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ವಿಜೇತರನ್ನು ಮತ್ತು ತರಬೇತಿದಾರ ಹೆಚ್ ಹಾಲೇಶ್ ಅವರನ್ನು ಅಭಿನಂದಿಸಿದ್ದಾರೆ.