ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚಲಿಸುತ್ತಿದ್ದ ಕಾರು ಅಪಘಾತ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿರುವಾಗ ಅಪಘಾತ. ಸಚಿವ ಲಕ್ಷ್ಮಿ ಹೆಬ್ಬಾಳಕರ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಇಬ್ಬರೂ ಕೂಡ ಒಂದೇ ಕಾರಿನಲ್ಲಿ ಚಲಿಸುತ್ತಿರುವಾಗ ನಡೆದ ಅಪಘಾತ.
ಕಿತ್ತೂರಿನ ಅಂಬಡಗಟ್ಟಿ ಬಳಿ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಕಾರಣ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂದಿನ ಭಾಗ ನುಜ್ಜು ಗುಜ್ಜಾಗಿದ್ದು, ಅದೃಷ್ಟವಶ ಸಚಿವೆ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ್ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರು.
ಕೂಡಲೇ ಸಚಿವೆ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ ರವಿ ಪಾಟೀಲ್ ಅವರು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಅದೇ ರೀತಿ ಬೆಳಗಾವಿ SP ಭೀಮಾಶಂಕರ್ ಗುಳೇದವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ.