ಬೆಳಗಾವಿ ಡಿ. 4: ಸಾಮಾಜಿಕ ಜಾಲತಾಣದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ (38) ಎಂಬ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಚಾರವಾಗಿ ಆರೋಪಿ ಮೋಹಿತ್ ನರಸಿಂಹಮೂರ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿಯವರ ಆಪ್ತ ವಿಜಯ್ ತಳವಾರ್ ಅವರು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು.
ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯ ಪೊಲೀಸರು ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಕರೆತಂದು ಕೋರ್ಟಿಗೆ ಹಾಜರುಪಡಿಸಿದ್ದಾರೆ.