ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಪ್ರತಿಭಟನೆ.

ಬೆಳಗಾವಿ ಚಳಿಗಾಲ ಅಧಿವೇಶನ:

ರಾಜ್ಯ ಸರಕಾರಿ  ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು. ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಅಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುತ್ತಾರೆ. ಗುತ್ತಿಗೆದಾರರು, ವಾರ್ಡನ್‌ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಆಗ್ರಹಿಸಿದರು.

ಹೊರ ಗುತ್ತಿಗೆ ನೌಕರರ ಪ್ರತಿಭಟನೆಯ ವಿಡಿಯೋ 👇https://youtu.be/gITXnJtLVMg

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿಯ ಸುವರ್ಣಾ ಗಾರ್ಡನ್‌ನಲ್ಲಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಬೇಕೆ ಬೇಕು ನ್ಯಾಯ ಬೇಕು ಘೋಷಣೆ

ರಾಜ್ಯ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ

ತಿಂಗಳಿಗೆ ಕನಿಷ್ಠ 31 ಸಾವಿರ ನೀಡಬೇಕು

ನೇರವಾಗಿ ಇಲಾಖೆಯಿಂದ ವೇತನ ಆಗ್ಬೇಕು

ನಿವೃತ್ತಿವರೆಗೂ ಸೇವಾ ಭದ್ರತೆ ಒದಗಿಸಬೇಕು

ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಒದಗಿಸಬೇಕು

ವಿವಿಧ 23 ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಒತ್ತಾಯ