SSLC ಪರೀಕ್ಷೆ ಫಲಿತಾಂಶ: ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ.

SSLC ಪರೀಕ್ಷೆ ಫಲಿತಾಂಶ 2024:  ಮಾರ್ಚ 25 ರಿಂದ ಏಪ್ರಿಲ್ 6 ವರಗೆ ನಡೆದ SSLC ಪರೀಕ್ಷೆಯ ಮೌಲ್ಯಮಾಪನ ಮುಗಿದು ಇಂದು ಬೆಳಿಗ್ಗೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು. ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಪ್ರಥಮ ಸ್ಥಾನ ಪಡೆದ ಅಂಕಿತಾ ಕೊಣ್ಣೂರ

ಇಂದು 10:30 ಕ್ಕೆ ಇಲಾಖೆಯ ಜಾಲತಾಣದಲ್ಲಿ ಫಲಿತಾಂಶವನ್ನು ಪ್ರಕಟಿಸಿದ ಶಿಕ್ಷಣ ಇಲಾಖೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ್ ಪಡೆದ  ಹೆಸರನ್ನು ಸೂಚಿಸಿದ ಶಿಕ್ಷಣ ಇಲಾಖೆ. ಪ್ರಥಮ ಸ್ಥಾನ್ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೇಳ್ಳಿಗೇರಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

  • ಪ್ರಥಮ ಸ್ಥಾನ: ಕುಮಾರಿ ಅಂಕಿತಾ ಕೊಣ್ಣೂರ