ನಾಳೆ ಹುಕ್ಕೇರಿಯಲ್ಲಿ ಬೃಹತ್ ಉದ್ಯೋಗ ಮೇಳ

ಬೆಳಗಾವಿ ನ.15: ಉದ್ಯೋಗ ಹುಡುಕಾಟದಲ್ಲಿರುವ ಯುವಕ ಯುವತಿಯರಿಗೆ  ಇದು ಸುವರ್ಣ ಅವಕಾಶ. ಉದ್ಯೋಗ ಆಕಾಂಕ್ಷಿಗಳಿಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಇದೆ ನವಂಬರ್ 16 ರಂದು ಎಸ್ ಕೆ ಪಬ್ಲಿಕ್ ಸಿಬಿಎಸ್ ಈ ಶಾಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9:00 ರಿಂದ  ಸಾಯಂಕಾಲ 5:00 ರ ವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಿ ಆರ್ ಶೆಟ್ಟಿ ಫೌಂಡೇಶನ್ ಅಧ್ಯಕ್ಷರಾದ ಸಿ ಆರ್ ಶೆಟ್ಟಿ ಹೇಳಿದರು.

ಇನ್ನು ಈ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು ಇದರಲ್ಲಿ 3 ಸಾವಿರ ಉದ್ಯೋಗಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು  ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ ಡಿಪ್ಲೋಮಾ ಪದವಿ ಹಾಗೂ ಸ್ನಾತಕೋತರ ವಿದ್ಯಾರ್ಹತೆ ಹೊಂದಿದ್ದ ಅರ್ಹ ಅಭ್ಯರ್ಥಿಗಳು ಸ್ವ ವಿವರದೊಂದಿಗೆ ನೇಮಕಾತಿಯಲ್ಲಿ ಸೂಕ್ತ ದಾಖಲಾತಿಗಳ ಸಮೇತ  ಭಾಗವಹಿಸಬಹುದು.

ಈ ಬೃಹತ್ ಉದ್ಯೋಗ ಮೇಳವು ಎಸ್ ಎಸ್ ಏನ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹುಕ್ಕೇರಿ ಹಾಗೂ ಸಿಆರ್ ಶೆಟ್ಟಿ ಪೌಂಡೇಶನ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಉದ್ಯೋಗಧಾರಿತ ತರಬೇತಿ ಕೇಂದ್ರ ಹಾಗೂ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿ ಆರ್ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.